ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾ.25 ರಿಂದ 21 ದಿನಗಳ ಕಾಲ ಲಾಕಡೌನ್ ಆದೇಶಿಸಿದ್ದಾರೆ. ಆದರೆ ಲಾಕ್ ಡೌನ್ ಉಲ್ಲಂಘಿಸಿದವ ವಿರುದ್ಧ ಈಗ ಕೇಸ್ ದಾಖಲಾಗುತ್ತಿವೆ.
ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಂ ಕ್ವಾರಂಟೈನ್ ಮತ್ತು ಕಲಂ 144 ಸಿ.ಆರ್.ಪಿ.ಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಬೀದರ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು. ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಎಂದು ಆದೇಶವಿದ್ದರೂ ಅನವಶ್ಯಕವಾಗಿ ಸಂಚಾರಿಸಿದವರ 213 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಂಥವರ ವಿರುದ್ಧ ಕಾನೂನು ಪ್ರಕ್ರಿಯೆ ಜರುಗಿಸಲಾಗಿದೆ.
ಇನ್ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಿ.ಎಲ್.ನಾಗೇಶ ತಿಳಿಸಿದ್ದಾರೆ.