Publish Date: Sun, 19 Apr 2020 (21:31 IST)
Updated Date: Sun, 19 Apr 2020 (21:34 IST)
ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ಆರಂಭದಿಂದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಕಲಬುರಗಿ ಜಿಲ್ಲೆಯ 118 ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 122 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ಇನ್ನೂ ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 659 ವಾಹನಗಳನ್ನು ವಶಕ್ಕೆ ಪಡೆದು 92,700 ರೂ. ದಂಡ ವಿಧಿಸಲಾಗಿದೆ ಎಂದು ಎಸ್.ಪಿ. ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.