ಲೋಕಾಯುಕ್ತ ಕಚೇರಿಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ನ್ಯಾಯಾಲಯಕ್ಕೆ ಹಾಜರಾಗಿದ್ದ ನಿವೃತ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಡಿ.ಟಿದೇವೇಂದ್ರನ್ ಅವರು ಜಾಮೀನು ಅರ್ಜಿ ಅದೇಶದವರೆಗೂ ಮಧ್ಯಂತರ ಜಾಮೀನು ನೀಡಿದ್ದಾರೆ. ಒಂದು ಲಕ್ಷದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಾಡಿದ್ದಾರೆ.
ಎಸ್ಐಟಿ ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ರದ್ದುಪಡಿಸುವಂತೆ ಕೋರಿ ನಿವೃತ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು.