Publish Date: Thu, 25 May 2023 (08:35 IST)
Updated Date: Thu, 25 May 2023 (09:37 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಗೂ ಲೋಕಸಭಾ ಚುನಾವಣೆಗೂ ಸಂಬಂಧ ಇದ್ಯಾ ಎಂಬ ಪ್ರಶ್ನೆ ಮೂಡಿದೆ. ಈಗ ಸಚಿವರಾದರೆ ಸಾಲದು ಲೋಕಸಭೆ ಚುನಾವಣೆಗೂ ಸಿದ್ದರಿರಬೇಕು ಎಂದು ಕನಿಷ್ಠ 10 ರಿಂದ 15 ಜನ ಸಚಿವರಿಗೆ ಈಗಲೇ ಬಿಗ್ ಟಾಸ್ಕ್ ಫಿಕ್ಸ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಸಚಿವ ಸ್ಥಾನದ ಆಕಾಂಕ್ಷಿಗಳಾಗಿ ಹಲವು ಶಾಸಕರು ಹೈಕಮಾಂಡ್ ಬೆನ್ನು ಬಿದ್ದಿದ್ದಾರೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ವಿಚಾರದಲ್ಲಿ ಹೈಕಮಾಂಡ್ ಲೋಕಸಭೆಯ ದಾಳ ಉರುಳಿಸಲು ಮುಂದಾಗಿದೆ. ಲೋಕಸಭೆ ಗೆಲುವಿನ ಲೆಕ್ಕಾಚಾರ ಹಾಕಿಯೇ ಈ ಬಾರಿ ಸಚಿವ ಸ್ಥಾನದ ಅವಕಾಶ ನೀಡಲಾಗುತ್ತದೆ ಎಂಬುದು ಕಾಂಗ್ರೆಸ್ ವಲಯದ ಮಾತು.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25+1, ಕಾಂಗ್ರೆಸ್ 1, ಜೆಡಿಎಸ್ 1 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ.