Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಬಳಿ ನಡೆದಿದೆ. ದೀಪಕ್, ಯುವರಾಜ್, ರಾಹುಲ್ ಮೃತರು. ಮೂವರು ಗೋಗಿ ತಾಂಡಾದಿಂದ ಸಾವಳಗಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಆಗ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿ ಹೊರಟ್ಟಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.