Publish Date: Fri, 23 Nov 2018 (15:05 IST)
Updated Date: Fri, 23 Nov 2018 (15:07 IST)
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ನಡೆದಿದೆ.
ಖಾಲಿ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯಿಂದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಪಕ್ಕದ ಲೈನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಲಾರಿಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡೆತಡೆಯುಂಟಾಯಿತು.
ರಾಮನಗರ ತಾಲ್ಲೂಕಿನ ಬೇಜರಹಳ್ಳಿ ಕಟ್ಟೆ ಗ್ರಾಮದ ಬಳಿ ಘಟನೆ ನಡೆದಿದೆ. ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.