ಬೆಂಗಳೂರು : 15 ವರ್ಷಗಳ ಬಳಿಕ ಕರ್ನಾಟಕದಲ್ಲಿ ಲಾಟರಿ ಮಾರಾಟವನ್ನು ಸರ್ಕಾರ ಅಧಿಕೃತಗೊಳಿಸುತ್ತಾ? ಈ ಬಗ್ಗೆ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಖುದ್ದು ರಾಜ್ಯಪಾಲರ ಕಛೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.
ಲಾಟರಿ ಮಾರಾಟ ಬ್ಯುಸಿನೆಸ್, ನೆರೆಯ ಕೇರಳ ರಾಜ್ಯದಲ್ಲಿ ಎಷ್ಟು ಫೇಮಸ್ ಆಗಿದ್ದು, ನಮ್ಮ ರಾಜ್ಯದಲ್ಲಿಯೂ ಇದು ಚಾಲ್ತಿಯಲ್ಲಿತ್ತು. ಲಾಟರಿ ಮಾರಾಟದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ವು ಅಂತ 2007ರಲ್ಲಿ ರಾಜ್ಯ ಸರ್ಕಾರ ಲಾಟರಿ ಮಾರಾಟವನ್ನು ನಿಷೇಧಿಸಿತು.
ಆದ್ರೆ ಇದೀಗಾ ಮತ್ತೆ ಲಾಟರಿ ಮಾರಾಟವನ್ನು ಶುರು ಮಾಡಬೇಕು ಎಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯಪಾಲರಿಗೂ ಪತ್ರ ಬರೆದಿದ್ದು, ಪುನರಾರಂಭ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.