Publish Date: Thu, 16 May 2019 (14:23 IST)
Updated Date: Thu, 16 May 2019 (14:26 IST)
ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕನಮಡಿ ಗ್ರಾಮದ ಹೊರ ಭಾಗದ ಜಮೀನಿನಲ್ಲಿ ಘಟನೆ ನಡೆದಿದೆ.
ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದ ಯುವಕ, ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕನಮಡಿ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.
ಅಲ್ಲಾಭಕ್ಷ ಹಾಗೂ ಅನ್ಯ ಜಾತಿಯ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.
ಇಬ್ಬರು ಪ್ರೀತಿಯ ವಿಚಾರವಾಗಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.
ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.