Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ.
ಯಡಿಯೂರಪ್ಪ ನನ್ನನ್ನು ಸರಕಾರದ ಕಮಿಷನ್ ಏಜೆಂಟ್ ಎಂದು ಹೇಳಿಕೆ ನೀಡಿರುವುದು ನನಗೆ ತುಂಬಾ ಬೇಸರವಾಗಿದೆ. ವಕೀಲರೊಂದಿಗೆ ಚರ್ಚಿಸಿ ಮೊಕದ್ದಮೆ ಹೂಡುವ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಸರಕಾರದ ಕಮಿಷನ್ ಏಜೆಂಟ್‌ರಾಗಿ ಸಿಎಂ ಸಿದ್ದರಾಮಯ್ಯರಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದಾರೆ. ಮುಂಬರುವ ಚುನಾವಣೆಗಾಗಿ ಆರ್ಥಿಕ ಸಂಪನ್ಮೂಲ ಕ್ರೋಢಿಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವುದು ಅವರ ಘನತೆಗೆ ತಕ್ಕುದಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಯಡಿಯೂರಪ್ಪ ಮತ್ತು ಅವರ ಗ್ಯಾಂಗ್ ನನ್ನನ್ನು ಟಾರ್ಗೆಟ್ ಮಾಡಿ ಹೇಳಿಕೆ ನೀಡುತ್ತಿದೆ. ಆದರೆ, ಇಂತಹ ಹೇಳಿಕೆಗಳಿಗೆ ಬೆದರುವ ವ್ಯಕ್ತಿ ನಾನಲ್ಲ. ಸಿಎಂ ಸಿದ್ದರಾಮಯ್ಯ ಮುಂದಿನ ವಾರದಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದು ಆ ಸಂದರ್ಭದಲ್ಲಿ ಯಡಿಯೂರಪ್ಪನವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಸವಾಲ್ ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.