Publish Date: Tue, 23 May 2023 (14:30 IST)
Updated Date: Tue, 23 May 2023 (15:01 IST)
ಸಿಎಂ ಆಗಿ ಐದು ವರ್ಷ ಸಿದ್ದರಾಮಯ್ಯನವರೇ ಇರ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ
ಸಚಿವ ಎಂ.ಬಿ.ಪಾಟೀಲ್ ಯೂ ಟರ್ನ್ ಹೊಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು. ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು. ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಅಂತ ನಮ್ಮ ನಾಯಕರು, AICC ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನೇ ಹೇಳ್ದೆ. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೇ ಹೇಳಿದ್ದೇನೆ ಎಂದ್ರು. ಅಧಿಕಾರ ಹಂಚಿಕೆ ಬಗ್ಗೆ ಸಂಧಾನ ಆಗಿದ್ಯಾ ಎಂಬ ಪ್ರಶ್ನೆಗೆ ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದ್ರು.