Publish Date: Tue, 07 Mar 2023 (14:26 IST)
Updated Date: Tue, 07 Mar 2023 (14:46 IST)
ಪುತ್ರನ ಲಂಚ ಪ್ರಕರಣದಲ್ಲಿ A1 ಆರೋಪಿಯಾಗಿರುವ KSDL ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದೆ. ನ್ಯಾಯಮೂರ್ತಿ ನಟರಾಜನ್ ಅವರು ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ಪೊಲೀಸರು ದಾಖಲೆ ಸಲ್ಲಿಸುವವರೆಗೆ ಹೈಕೋರ್ಟ್ ಏಕಸದಸ್ಯ ಪೀಠ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ನೀಡಿದೆ. 5 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಕೆ.ನಟರಾಜನ್ ಹೇಳಿದ್ದು, ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದರು.