Webdunia - Bharat's app for daily news and videos

Install App

ಮಡಿಕೇರಿ: ಪತ್ನಿಯನ್ನು ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ

Sampriya
ಶನಿವಾರ, 20 ಜುಲೈ 2024 (19:31 IST)
ಮಡಿಕೇರಿ: ಗಂಡ  ಹೆಂಡತಿ ನಡುವೆ ಶುರುವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಪತಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆಯಾದ ಪತ್ನಿಯನ್ನು ಶಿಲ್ಪ ಸೀತಮ್ಮ (36) ಎಂದು ಗುರುತಿಸಲಾಗಿದೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ.

ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದರು. ಇದನ್ನು ಆಕ್ಷೇಪಿಸಿದ ಪತಿ ನಾಯಕಂಡ ಬೋಪಣ್ಣ, ಈ ವಿಚಾರವಾಗಿ ರಾತ್ರಿಯೆಲ್ಲ ಜಗಳ ನಡೆಸಿ ಇಂದು(ಜು.20) ಬೆಳಗ್ಗೆ ಗುಂಡಿಕ್ಕಿ ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ.

ಶಿಲ್ಪ ಸೀತಮ್ಮ 2012 ರಿಂದ 2017 ರವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು.  ಹತ್ಯೆ ಬಳಿಕ ಆರೋಪಿ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments