Publish Date: Thu, 26 Oct 2023 (16:40 IST)
Updated Date: Thu, 26 Oct 2023 (16:43 IST)
ಯಾರಿಂದಲೂ 1 ರೂ. ಪಡೆದುಕೊಂಡಿಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ನೋಡೋಣ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಬೇಕಿದ್ದರೇ ಚರ್ಚೆಗೆ ಬರಲಿ, ನಾವು ನಮ್ಮ ಎಂಪಿ ಜೊತೆ ಬರುತ್ತೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚರ್ಚೆಗೆ ಬರ್ತಾರಾ? ಎಂದು ಸವಾಲು ಹಾಕಿದ್ದಾರೆ.