ರಕ್ಷಣಾ ಕಾರ್ಯಾಚರಣೆ ವೇಳೆ ಬಾವಿಗೆ ಬಿದ್ದು ಮೂವರು ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ಸಂಭವಿಸಿದೆ.
ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸುತ್ತಿದ್ದಾಗ ಹೆಚ್ಚಿನ ಸಂಖ್ಯೆಯ ಜನರು ನಿಂತಿದ್ದರಿಂದ ಬಾವಿಯ ಕಟ್ಟೆ ಕುಸಿದಿದೆ. ಘಟನೆಯಲ್ಲಿ 19 ಮಂದಿಯನ್ನು ರಕ್ಷಿಸಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಧಾನಿಯಿಂದ 50 ಕಿ.ಮೀ. ದೂರದ ಗಂಜ್ ಬಸೋಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 50 ಅಡಿ ಆಳದ ಬಾವಿ ಇದಾಗಿದ್ದು, 20 ಅಡಿ ಆಳದಷ್ಟು ನೀರು ತುಂಬಿತ್ತು.
ಘಟನೆ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಚೌಹ್ವಾಣ್ ಆಘಾತ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಿರಂತರ ಸಂಪರ್ಕದಲ್ಲಿ ಇದ್ದು, ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.