ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಗದಗ್, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಗೆ ಬಂದ್ ಬಿಸಿ ತಟ್ಟವ ಸಂಭವವಿದ್ದು, ದೈನಂದಿನ ಚಟುವಟಿಕೆಗಳು ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು,
ಕನ್ನಡ ಚಿತ್ರೋದ್ಯಮ ಸೇರಿದಂತೆ ಹೋಟೆಲ್, ಸರಕಾರಿ ನೌಕರರ ಸಘ, ಆಟೋ ಮಾಲೀಕರ ಸಂಘ, ಸೇರಿದಂತೆ ಹಲವು ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ, ಗದಗ್, ಬೆಳಗಾವಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.