ಉತ್ತರ ಕರ್ನಾಟಕ ಭಾಗದ ಜನರ ಬಹು ವರ್ಷದ ಬೇಡಿಕೆಯಾದ ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಬಹುಶಃ ಗೋವಾ ವಿಧಾನಸಭಾ ಚುನಾವಣೆ ಬಳಿಕ ಮಹದಾಯಿ ವಿವಾದ ಇತ್ಯರ್ಥವಾಗಲಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದ ಕುರಿತು ರಾಜ್ಯ ಹಾಗೂ ಕೇಂದ್ರ ಸರಕಾರದ ನಾಯಕರ ಜೊತೆ ಚರ್ಚಿಸಿದ್ದೇನೆ. ಗೋವಾ ವಿಧಾನ ಸಭಾ ಚುನಾವಣೆ ಬಳಿಕ ಮಹದಾಯಿ ವಿವಾದ ಇತ್ಯರ್ಥವಾಗಲಿದೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ಯಾರು ರಾಜಕಾರಣ ಮಾಡಬಾರದು ಎಂದು ಹೇಳಿದರು.
ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಅಧಿವೇಶನ ಕರೆಯುವುದಾಗಿ ಹೇಳಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಳ್ಳೆಯ ನಿರ್ಧಾರ ಕೈಗೊಂಡಿದೆ. ವಿಧಾನ ಮಂಡಲ ವಿಶೇಷ ಅಧಿವೇಶನದಲ್ಲಿ ಕೈಗೊಂಡಿರುವ ನಿರ್ಣಯವನ್ನು ಅಭಿನಂದಿಸುತ್ತೇನೆ. ಮಹದಾಯಿಗಾಗಿ ವಿಶೇಷ ಅಧಿವೇಶನ ನಡೆಸುವುದಾಗಿ ಮುಖ್ಯಮಂತ್ರಿಯವರು ಸದನದಲ್ಲಿ ಹೇಳಿದ್ದಾರೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ