ಮಹಾದಾಯಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಸಂಪೂರ್ಣ ಬಂದ್‌ಗೆ ಕರೆ ನೀಡಿವೆ.
ನಾಳೆ ಉತ್ತರ ಕರ್ನಾಟಕ ಬಂದ್‌ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್, ತುರ್ತು ಸೇವೆ ಹೊರತುಪಡಿಸಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‍ಗೆ ಕರೆ ನೀಡಲಾಗಿದೆ
ಉತ್ತರ ಕರ್ನಾಟಕದಾದ್ಯಂತ ಸಾರಿಗೆ ಸಂಚಾರ ಸೇರಿದಂತೆ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ನಾಗರಿಕರು ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘಟನೆಗಳು ಮನವಿ ಮಾಡಿವೆ.
ನಾಳೆ ಬಸ್ ಸಂಚಾರ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು ಬಂದ್ ಮಾಡಲಾಗುವುದು. ಕೇಂದ್ರ ಸರ್ಕಾರದ ಕಚೇರಿಗಳಾದ ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣ ಹಾಗೂ ಸಂಸದರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟಗಾರರು ಒಕ್ಕೋರಲಿನ ನಿರ್ಣಯ ತಗೆದುಕೊಂಡಿದ್ದಾರೆ.
ಕೇಂದ್ರ ಸರಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಿ ತೀವ್ರ ತೆರನಾದ ಪ್ರತಿಭಟನೆಯನ್ನು ವ್ಯಕ್ತಪಡಿಸಲಾಗುವುದು ಎಂದು ಮಹದಾಯಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.