ಬೆಂಗಳೂರು : ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಪದೇ ಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಇದನ್ನೆಲ್ಲಾ ನೋಡಿಕೊಂಡು ಮೌನವಾಗಿದೆ.
ಇದು ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಕಾರಣವಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಗಡಿ ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರ್ಕಾರದ ವಿವಾದಾಸ್ಪದ ಕ್ರಮಕ್ಕೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮಹಾರಾಷ್ಟ್ರದ ನಡೆ ಹಾಗೂ ಕೇಂದ್ರ ಸರ್ಕಾರದ ಮೌನ ಒಕ್ಕೂಟ ವ್ಯವಸ್ಥೆಯ ಒಡಕಿಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು.
ಒಕ್ಕೂಟ ವ್ಯವಸ್ಥೆಯ ಎಲ್ಲೆಗಳನ್ನು ಮೀರಿ ಮಹಾರಾಷ್ಟ್ರ ಅಹಂಕಾರದಿಂದ ವರ್ತಿಸುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಶಿಂಧೆ ಸೂತ್ರದ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ (ಓಚಿಡಿeಟಿಜಡಿಚಿ ಒoಜi) ಸರ್ಕಾರದ ಮೌನವೇಕೆ ಎಂದು ಪ್ರಶ್ನಿಸಿದರು.