ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮೇಕ್ ಇನ್ ಇಂಡಿಯಾ ಅಂದರೆ, ಯುವಕರು ಪಕೋಡ ಮಾರಾಟ ಮಾಡುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಠಿ ಮಾಡುತ್ತೇವೆ ಎಂದಿದ್ದರು. ಆದರೆ, ಅದನ್ನು ನಾವು ತಪ್ಪಾಗಿ ತಿಳಿದುಕೊಂಡಿದ್ದೇವೆ. ಮೇಕ್ ಇನ್ ಇಂಡಿಯಾ ಪಕೋಡ ಮಾರುವುದು ಕೂಡ ಆಗಿದೆ ಎಂದಿದ್ದಾರೆ.
ಪಕೋಡ ಮಾರಿ ಯುವಕರು ಬದುಕಬೇಕಿದೆ. ಇಲ್ಲವಾದರೆ ಕಳ್ಳತನ ಮಾಡಿ ಬದುಕಬೇಕು. ಇದು ಮೇಕ್ ಇನ್ ಇಂಡಿಯಾ ಯೋಜನೆ. ಉಚಿತ ಸಲಹೆ ನೀಡಲು ಪ್ರಧಾನಿಯಾಗಬೇಕಾ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯವರು ಒವೈಸಿ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಮುಸ್ಲಿಂ ಮತಗಳು ಪಡೆಯುವಲ್ಲಿ ಹಿನ್ನಡೆಯಾಗಲಿದೆ ಎಂಬ ಕಾರಣಕ್ಕೆ ಈ ರೀತಿ ಅಪಪ್ರಚಾರ ಮಾಡುತ್ತಿದೆ. ಸ್ಪಷ್ಟ ಮಾಹಿತಿಯಿದ್ದರೆ ಜನರ ಮುಂದಿಡಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.