ರಾಹುಲ್ ಗಾಂಧಿ ಎದುರು ಕೈ ಕಟ್ಟಿ ನಿಲ್ತಾರೆ ಎನ್ನುವ ಮಾಜಿ ಸಿಎಂ ಎಸ್.ಎಂ.ಕೃಷ್ಣ ಹೇಳಿಕೆಗೆ ತಿರುಗೇಟು ನೀಡಿರುವ ಮಲ್ಲಿಕಾರ್ಜುನ್ ಖರ್ಗೆ, ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸಂದರ್ಭ ಬಂದಾಗ ತಕ್ಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎದುರು ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಕೈ ಕೊಟ್ಟಿಕೊಂಡು ನಿಲ್ಲುತ್ತಾರೆ. ಅಂತಹ ಪರಿಸ್ಥಿತಿ ಕಾಂಗ್ರೆಸ್‌ನಲ್ಲಿದೆ ಎಂದು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಎಸ್.ಎಂ.ಕೃಷ್ಣ ಆರೋಪಿಸಿದ್ದರು.
ಕಾಂಗ್ರೆಸ್ ಪಕ್ಷದಿಂದ ಎಲ್ಲಾ ಅಧಿಕಾರಿಗಳನ್ನು ಅನುಭವಿಸಿ, ಜಾತ್ಯಾತೀತ ಸಿದ್ದಾಂತಗಳನ್ನು ಪಾಲಿಸಿಕೊಂಡು ಬಂದಿದ್ದ ಮುಖಂಡರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿ ಕೇವಲ ರಾಜಕೀಯ ಲಾಭಕ್ಕಾಗಿ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಖರ್ಗೆ ಬೆಂಬಲಿಗರು ಟೀಕಿಸಿದ್ದಾರೆ.
ತಮ್ಮ ಸ್ವಾರ್ಥ ಮತ್ತು ಪುತ್ರಿ ಹಾಗೂ ಅಳಿಯನ ಭವಿಷ್ಯಕ್ಕಾಗಿ ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಯೇ ಹೊರತು ಬಿಜೆಪಿ ಸಿದ್ದಾಂತಗಳನ್ನು ಮೆಚ್ಚಿ ಸೇರ್ಪಡೆಯಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.