ಬೆಂಗಳೂರು : ಉಡುಪಿಯ ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರು ಏನ್ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಡಿಸೆಂಬರ್ 13ರ ರಾತ್ರಿ ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ಹೋರಟ 7 ಮಂದಿ ಮೀನುಗಾರರಿರುವ ‘ಸುವರ್ಣ ತ್ರಿಭುಜ’ ಬೋಟ್ ನಾಪತ್ತೆಯಾಗಿತ್ತು. ಸಮುದ್ರದಲ್ಲಿ ಎಲ್ಲಿ ಹುಡುಕಾಟ ನಡೆಸಿದ್ರೂ ಬೋಟ್, ಮೀನುಗಾರರು ಪತ್ತೆಯಾಗಿಲ್ಲ. ಈ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ಬಂದರೂ ಈವರೆಗೆ ಯಾವುದೇ ಫಲಿತಾಂಶ ಸಿಕ್ಕಿಲ್ಲ.
ಈ ವಿಚಾರಕ್ಕೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಮಲ್ಪೆಯ ಮೀನುಗಾರರು ಸಮುದ್ರದಲ್ಲಿ ನಾಪತ್ತೆಯಾಗಿ ಎರಡೂವರೆ ತಿಂಗಳ ಮೇಲಾಯಿತು. ಸಂಸದರಾದ ನಳಿನ್‍ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ಏನು ಮಾಡ್ತಿದ್ದಾರೆ? ಅವರನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರಾ? ಇಂತಹ ಪ್ರತಿನಿಧಿಗಳು ಬೇಕಾ? ಜನ ಯೋಚನೆ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.