Publish Date: Wed, 06 Sep 2023 (16:15 IST)
Updated Date: Wed, 06 Sep 2023 (16:18 IST)
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಬಗೆಗಿನ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಉದಯನಿಧಿ ಮಾರನ್ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸನಾತನ ಧರ್ಮ ಕೊರೋನಾ, ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ವಿರೋಧ ಮಾಡಬಾರದು, ಸಂಪೂರ್ಣವಾಗಿ ನಾಶಪಡಿಸಬೇಕು ಎಂದು ಉದಯನಿಧಿ ಮಾರನ್ ಹೇಳಿದ್ದು,ಇದಕ್ಕೆ ಪ್ರತಿಕ್ರಿಯೆಸಿದ ದಿದಿ ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸಬೇಕಾಗಿದೆ ಉದಯನಿಧಿ ಅವರು ಯಾಕೆ ಮತ್ತು ಯಾವ ಆಧಾರದ ಮೇಲೆ ಈ ರೀತಿ ಕಾಮೆಂಟ್ ಮಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ ಎಂದರು. ಇನ್ನು ಇದಕ್ಕೆ ಕಾಂಗ್ರೆಸ ಪಕ್ಷದಲ್ಲಿಯೂಕೂಡಾ ಭಾರೀ ವಿರೋಧ ವ್ಯಕ್ತವಾಗ್ತಿದೆ.