Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಯುವತಿಗೆ ಕೆಲಸ ಕೊಡಿಸುವುದಾಗಿ ವಂಚಿಸಿ ವೇಶ್ಯಾವಾಟಿಕೆಗೆ ತಳ್ಳಲು ಹೊರಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಯಲ್ಲಿ ಜಗಳ ಮಾಡಿಕೊಂಡು ಕೋಲಾರದಿಂದ ಬೆಂಗಳೂರಿಗೆ ಬಂದಿದ್ದ ಯುವತಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿದ್ದಳು. ಆಕೆಯ ವಿವರವನ್ನು ಆರೋಪಿ ನಾಗೇಶ್ ಕೇಳಿ ತಿಳಿದುಕೊಂಡಿದ್ದಾನೆ.
ಬಳಿಕ ಆಕೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ದೆಹಲಿಗೆ ಕರೆದುಕೊಂಡು ಹೋಗಲು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕರೆತಂದಿದ್ದಾನೆ. ದೆಹಲಿಯಲ್ಲಿ ವೇಶ್ಯಾವಾಟಿಕೆಗೆ ತಳ್ಳುವುದು ಆತನ ಉದ್ದೇಶವಾಗಿತ್ತು. ಅದನ್ನು ಅರಿತ ಏರ್ ಪೋರ್ಟ್ ಪೊಲೀಸರು ಯುವತಿಯನ್ನು ರಕ್ಷಿಸಿದ್ದು, ಆರೋಪಿಯನ್ನು ಸೆರೆಹಿಡಿದಿದ್ದಾರೆ.