Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುವುದನ್ನೇ ಖಯಾಲಿ ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
31 ವರ್ಷದ ಯುವಕ ಬಂಧಿತ. ಈತ ಮಟನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದುದನ್ನೇ ಕಾಯಕ ಮಾಡಿಕೊಂಡಿದ್ದ.
ಇದಕ್ಕೂ ಮೊದಲು ಇದೇ ವಿಚಾರಕ್ಕೆ ಜೈಲು ವಾಸವನ್ನೂ ಅನುಭವಿಸಿದ್ದ. ಇದೀಗ ಅಪ್ರಾಪ್ತೆಗೆ ಕಿರುಕುಳ ನೀಡಿದ ವಿಚಾರದಲ್ಲಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಆತನನ್ನು ಬಂಧಿಸಲಾಗಿದೆ.