Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಯುವತಿಗೆ ಮೆಸೇಜ್ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿ ಮತ್ತು ಸಂತ್ರಸ್ತ ಯುವಕ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಯುವತಿಗೆ ಪ್ರತಿನಿತ್ಯ ಮೆಸೇಜ್ ಮಾಡಿ ತೊಂದರೆ ಕೊಡುತ್ತಿದ್ದ.
ಇದೇ ಕಾರಣಕ್ಕೆ ನಾಲ್ವರು ಆರೋಪಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪ್ರಾಣ ಉಳಿದಿದ್ದು, ಸದ್ಯಕ್ಕೆಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.