Publish Date: Sun, 06 Nov 2022 (17:43 IST)
Updated Date: Sun, 06 Nov 2022 (17:47 IST)
ಬೆಳಗಾವಿ ಜಿಲ್ಲೆಯ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಬಾಗಲಕೋಟೆಯಲ್ಲಿ ಮತ್ತೋರ್ವ ವ್ಯಕ್ತಿ ಸಾವನಪ್ಪಿದ್ದಾರೆ. ಮುದೇನೂರ ಗ್ರಾಮದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ವಿಠ್ಠಲ್ ಮೃತ ವ್ಯಕ್ತಿಯಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ವಿಠ್ಠಲ್ ಸಾವನಪ್ಪಿದ್ದಾರೆ. ವಿಠ್ಠಲ್ ಅಕ್ಟೋಬರ್ 25ರಂದು ಕಲುಷಿತ ನೀರು ಸೇವಿಸಿ ವಾಂತಿಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ರು.