Publish Date: Tue, 05 Mar 2024 (19:42 IST)
Updated Date: Tue, 05 Mar 2024 (20:08 IST)
ಬೆಂಗಳೂರು-ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ.
ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದ್ದು,ಮೇಲ್ಸೇತುವೆಯಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪ್ರಕರಣ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.ಹೌದು, ನಗರದ ಹೃದಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.
ಈತ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಮೇಲಿನಿಂದ ಕೆಳಗೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದಾರೆ. ಪರಿಣಾಮ ಕಾರಿನ ಗ್ಲಾಜು ಪುಡಿ ಪುಡಿಯಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.ಇನ್ನೂ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ
ಅಲ್ಲದೇ ಚಲಿಸುತ್ತಿದ್ದ ರೈಲಿನಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಯುವತಿ ಚಲಾಯಿಸುತ್ತಿದ್ದ ಕಿಯಾ ಸಾನೆಟ್ ಕಾರು ಇದಾಗಿದ್ದು, ಸುಮಾರು 35 ರಿಂದ 40 ವರ್ಷದ ಆಸುಪಾಸಿನ ವ್ಯಕ್ತಿ ಎಂಬುದು ತಿಳಿದು ಬಂದಿದೆ. ಬಿದ್ದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.