Webdunia - Bharat's app for daily news and videos

Install App

ಪ್ರೀತಿಸಿ ವಿವಾಹವಾಗಿದ್ದ ಪತಿ ಮಾಡಿದ್ದೇನು ಗೊತ್ತೆ?

Webdunia
ಶುಕ್ರವಾರ, 30 ಡಿಸೆಂಬರ್ 2016 (11:05 IST)
ಪ್ರೀತಿಸಿ ವಿವಾಹವಾಗಿದ್ದ ಪತಿಯೇ ತನ್ನ ತಂದೆಯೊಂದಿಗೆ ಸೇರಿ ಪತ್ನಿ ಕೊಲೆಗೆ ಯತ್ನಿಸಿದ ಘಟನೆ ಕುಣಿಗಲ್‌ನಲ್ಲಿ ನಡೆದಿದೆ. 
ಹಾಸನ ಮೂಲದ ಗೀತಾ (26) ಹಲ್ಲೆಗೊಳಗಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರವಿ ಹಾಗೂ ಮಾವ ಶ್ರೀರಂಗಪ್ಪನನ್ನು ಅಮೃತೂರು ಪೊಲೀಸರು ಬಂಧಿಸಿದ್ದಾರೆ. 
 
ಕಳೆದ ಒಂದು ವರ್ಷದ ಹಿಂದೆ ಗೀತಾ ಕುಣಿಗಲ್ ತಾಲೂಕಿನ ಯಡಿಯೂರ ಹೋಬಳಿಯ ಹರಿಕೆಹಳ್ಳಿ ಗ್ರಾಮದ ರವಿ ಎನ್ನುವನನ್ನು ಪ್ರೀತಿಸಿ ವಿವಾಹವಾಗಿದ್ದಳು. ಅವರಿಬ್ಬರ ವಿವಾಹಕ್ಕೆ ರವಿ ಪೋಷಕರ ವಿರೋಧವಿತ್ತು. ಆದರೆ ಅದನ್ನು ಲೆಕ್ಕಿಸದೆ ಒಂದಾಗಿದ್ದ ಜೋಡಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ವಾಸವಾಗಿತ್ತು. 
 
ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ ಕೆಲ ದಿನಗಳ ಬಳಿಕ ಪತಿ ರವಿಯೂ ಸಹ ಪತ್ನಿಯ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಶಯ ವ್ಯಕ್ತಪಡಿಸಿದ್ದ.  ರವಿಯ ಈ ಅನುಮಾನಕ್ಕೆ ಆತನ ತಂದೆ ತುಪ್ಪ ಸುರಿದಿದ್ದ. ಬಳಿಕ ಇಬ್ಬರು ಸೇರಿ ಗೀತಾಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಅಂತೆಯೇ ಗುರುವಾರ ಆಕೆಯನ್ನು ಕೊಲ್ಲಲು ಪ್ರಯತ್ನಿಸಿದ್ದು ಅದೃಷ್ಟವಶಾತ್ ಬದುಕುಳಿದಿರುವ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments