Publish Date: Tue, 20 Sep 2022 (16:39 IST)
Updated Date: Tue, 20 Sep 2022 (17:41 IST)
ಬ್ಯಾಂಕ್ ಆಫ್ ಬರೋಡಾದಲ್ಲಿ ವಂಚನೆ ಮಾಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯಾಂಕ್ ನಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ ಆಂದ್ರ ಪ್ರದೇಶದ ಕುಮಾರ ಬೋನಾಲ ಕೃಷ್ಣಮೂರ್ತಿ ಬೋನಾಲ ಬಂಧಿತನಾಗಿದ್ದು, ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಿಂದ ಪತ್ನಿಯ ಖಾತೆಗೆ 26,99,5000 ರೂ. ವರ್ಗಾವಣೆ ಮಾಡಿಕೊಂಡು ಬ್ಯಾಂಕ್‌ಗೆ ಮೋಸ ಮಾಡಿ ನಂಚಿಕೆದ್ರೋಹ ಮಾಡಿರುವ ಬಗ್ಗೆ ವ್ಯವಸ್ಥಾಪಕ ವಿಘ್ನೇಶ್ವರ ಭಟ್ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ.