Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಹಾಗೂ ಸೌಮ್ಯ ನಾಯಕ್ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ದಂಪತಿ ನಿನ್ನೆಯಷ್ಟೆ ಕೊಡಗು ಪ್ರವಾಸ ಮುಗಿಸಿ ಬಂದಿದ್ದರು ಎನ್ನಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.