ಮಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿತ್ತು. ಆದರೆ ತುರ್ತಾಗಿ ಪೊಲೀಸರು ಫೈರಿಂಗ್ ಮಾಡಿದ್ರು.
ಹೀಗಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಆರೋಪಿಸಿದ್ದು, ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರಕಾರವೇ ಹೊಣೆ ಅಂತ ದೂರಿದ್ದಾರೆ.
250 ಜನರಷ್ಟೇ ಪ್ರತಿಭಟನೆ ಸೇರಿದ್ರು. 144 ಕಲಂ ಜಾರಿ ಮಾಡಿ ಫೈರಿಂಗ್ ಮೂಲಕ ಅಮಾಯಕರಿಬ್ಬರ ಸಾವಿಗೆ ಕಾರಣವಾಗಿದ್ದಾರೆ ಅಂತ ವಾಗ್ದಾಳಿ ನಡೆಸಿದ್ರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರಿಗೆ ಮನುಷ್ಯತ್ವವೇ ಇಲ್ಲ ಅಂತ ದಿನೇಶ್ ಗುಂಡುರಾವ್ ಕಿಡಿಕಾರಿದ್ರು.