ಮುಂಬರುವ ಮಾರ್ಚ್ 15 ರಂದು ನೂತನ ಕಚೇರಿ ಉದ್ಘಾಟಿಸಿದ ನಂತರ ಅರಮನೆ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗುವುದು. ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯ ನಂತರ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಹೆಚ್ಚಿನ ಕಾಲಾವಕಾಶ ದೊರೆಯಲಿ ಎನ್ನುವ ಉದ್ದೇಶದಿಂದ ಅವಧಿಗೆ ಮುಂಚೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವ ಬಗ್ಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.