ಹಾಜರಾತಿ ಕೊರತೆ ಕಾರಣದಿಂದ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿದ್ದಕ್ಕೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಕೆರಿಮತ್ತಿಹಳ್ಳಿಯಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಪದವಿ ಅಭ್ಯಸಿಸುತ್ತಿರುವ 9 ವಿದ್ಯಾರ್ಥಿಗಳಿಗೆ ಹಾಜರಿ ಕೊರತೆ ಇದ್ದುದರಿಂದ ಪರೀಕ್ಷೆ ಎದುರಿಸಲು ಅನುಮತಿಯನ್ನು ನಿರಾಕರಿಸಿ ಪ್ರವೇಶ ಪತ್ರವನ್ನು ನೀಡಿರಲಿಲ್ಲ.
ಇದನ್ನು ಖಂಡಿಸಿ ಎಲ್ಲ 23 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಹೊರಬಂದಿದ್ದಾರೆ ಮತ್ತು ಪ್ರತಿಭಟನೆ ನಡೆಸಿದ್ದಾರೆ. ಬಳಿಕ, ಪರೀಕ್ಷೆಗೆ ಅವಕಾಶ ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 9 ವಿದ್ಯಾರ್ಥಿಗಳು ಬೆದರಿಕೆ ಹಾಕಿದ್ದಾರೆ.
ಪರೀಕ್ಷೆ ಬರೆಯಲು ಅವಕಾಶ ನೀಡಿ. ಇಲ್ಲದಿದ್ದರೆ ದಯಾ ಮರಣ ನೀಡಿ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಅವರು ಕೇಳಿಕೊಂಡಿದ್ದಾರೆ.