ಬೀದರ್ ಜಿಲ್ಲೆಯಲ್ಲಿ ಎಮ್ ಎಲ್ ಸಿ ವಿಜಯ್ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.
ವಿಜಯ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲ್ಲೆಯಲ್ಲಿ ಔರಾದ್ ಪಟ್ಟಣ ಪಂಚಾಯತಿಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ವಿಜಯ್ ಸಿಂಗ್, ಔರಾದ್ ವಿಧಾನಸಭೆ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ್ ಕೌಡಿಯಾಳ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಸ್ಪಿಗೆ ದೂರು ನೀಡಲಾಗಿತ್ತು.
ಈ ಹಿನ್ನೆಲ್ಲೆಯಲ್ಲಿ ಹಿಂದುಳಿದ ವರ್ಗದ ನಾಯಕ ವಿಜಯಕುಮಾರ್ ಕೌಡಿಯಾಳರನ್ನ ವಿಜಯ್ ಸಿಂಗ್ ಅವಮಾನಿಸಿದ್ದಾರೆ. ಅವರಿಗೆ ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೊಳ್ಳಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಸಮಿತಿ ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನೆ ನಡೆಸಿ ವಿಜಯ್ ಸಿಂಗ್ ವಿರುದ್ಧ ದಿಕ್ಕಾರ ಕೂಗಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.