Publish Date: Mon, 29 Jul 2019 (10:42 IST)
Updated Date: Mon, 29 Jul 2019 (10:45 IST)
ಬೆಂಗಳೂರು : ಇಂದು ಸಿಎಂ ಯಡಿಯೂರಪ್ಪ ವಿಶ್ವಾಸ ಮತಯಾಚನೆಯ ಹಿನ್ನಲೆ ಇಂದು ಕಾಂಗ್ರೆಸ್ ನಾಯಕರು ಸಭಾತ್ಯಾಗ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ವಿಶ್ವಾಸ ಮತಯಾಚನೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎನ್ನಲಾಗಿದೆ. ಆದಕಾರಣ ಅಪರೇಷನ್ ಕಮಲ, ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ಅಂತಾ ಬಿಜೆಪಿ ವಿರುದ್ಧ ಆರೋಪ ಮಾಡಿ ಕಾಂಗ್ರೆಸ್ ನಿಂದ ಸಭಾತ್ಯಾಗ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿದ್ದರಾಮಯ್ಯ ಸೂಚನೆಮೇರೆಗೆ ಎಲ್ಲಾ ಕಾಂಗ್ರೆಸ್ ಶಾಸಕರಿಂದ ಸಭಾತ್ಯಾಗ ಮಾಡಲಿದ್ದು, ಈ ಮೂಲಕ ಬಿಜೆಪಿಗೆ ಮುಖಭಂಗ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ . ಹಾಗಾಗಿ ಸದನದಲ್ಲಿ ಬಿಜೆಪಿ, ಜೆಡಿಎಸ್ ತಂತ್ರ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.