Webdunia - Bharat's app for daily news and videos

Install App

ರಾಜ್ಯಾದ್ಯಂತ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್

Webdunia
ಭಾನುವಾರ, 28 ನವೆಂಬರ್ 2021 (20:12 IST)
ಬೆಂಗಳೂರು: ರಾಜ್ಯಾದ್ಯಂತ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಭೂ ಪರಿವರ್ತನೆ, ಭೂಮಿ ಬಳಕೆಯ ಬದಲಾವಣೆಗೆ ಸಂಬಂಧಿಸಿದ ಕಾನೂನುಗಳನ್ನು ವ್ಯಾಖ್ಯಾನಿಸಿರುವ ಹೈಕೋರ್ಟ್, 1964ರ ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿಯಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಿದ ನಂತರವೂ, ಕರ್ನಾಟಕ ಪಟ್ಟಣ ಮತ್ತು ಗ್ರಾಮ ಯೋಜನೆ ಕಾಯ್ದೆ-1961 ಅಡಿ ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದೆ.
ಬಡವಾಣೆ ಯೋಜನೆಯನ್ನು ಅನುಮೋದಿಸದ ಮಂಡ್ಯ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಂಡವ್ಯ ಗೃಹ ನಿರ್ಮಾಣ ಸಹಕಾರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಪೀಠ ತನ್ನ ಆದೇಶದಲ್ಲಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರ ಅಡಿಯಲ್ಲಿ ಜಿಲ್ಲಾಧಿಕಾರಿಯಿಂದ ಭೂ ಪರಿವರ್ತನೆಗೆ ಅನುಮತಿ ಪಡೆದುಕೊಂಡಾಕ್ಷಣ ಕೆಟಿಸಿಪಿ ಕಾಯ್ದೆಯ ಸೆಕ್ಷನ್ 14ರ ಅಡಿಯಲ್ಲಿ ಭೂ ಬಳಕೆಯ ಬದಲಾವಣೆಗೂ ಅನುಮತಿ ಸಿಕ್ಕಿದೆ ಅಥವಾ ತಂತಾನೇ ಬದಲಾವಣೆ ಆಗಿದೆ ಎಂದು ಅರ್ಥವಲ್ಲ. ಭೂಮಿ ಇನ್ನೂ ಯೋಜನಾ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲೇ ಇದೆ ಎಂದು ಅರ್ಥ. ಹೀಗಾಗಿ ಜಿಲ್ಲಾಧಿಕಾರಿಯಿಂದ ಭೂ ಪರಿವರ್ತನೆಗೆ ಅನುಮೋದನೆ ಸಿಕ್ಕಿದ್ದರೂ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುತ್ತಿದ್ದರೆ, ಪ್ರಾಧಿಕಾರದಿಂದಲೂ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments