Publish Date: Sun, 05 Jul 2020 (18:31 IST)
Updated Date: Sun, 05 Jul 2020 (18:33 IST)
ಕೊರೊನಾ ವೈರಸ್ ತಡೆಗೆ ರಾಜ್ಯ ಸರಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಂಡೇ ಲಾಕ್ ಡೌನ್ ಜಾರಿಗೊಳಿಸಿದೆ.
ಆದರೆ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಅಜಯ್ ಕುಮಾರ್ ಅವರ ಜನ್ಮದಿನವನ್ನು ಆಚರಣೆ ಮಾಡಲಾಗಿದೆ.
ಕಚೇರಿ ಸಿಬ್ಬಂದಿ, ಪಾಲಿಕೆಯ ಕೆಲವು ಸದಸ್ಯರು, ಆಪ್ತರು ಮೇಯರ್ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಯಾವುದೇ ಮಾಸ್ಕ್, ಸಾಮಾಜಿಕ ಅಂತರ ಪಾಲನೆಯಾಗಿಲ್ಲ ಎಂಬ ದೂರುಗಳು ಕೇಳಿಬಂದಿವೆ.
ಇನ್ನು, ಇದಕ್ಕೆ ಸ್ಪಷ್ಟನೆ ನೀಡಿರುವ ಮೇಯರ್, ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.