Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನನ್ನನ್ನು ಬೇಜವಾಬ್ದಾರಿ ಎಂದು ಹೇಳುವ ಹಕ್ಕು ನಿಮಗಿಲ್ಲ: ಸಚಿವ ಪಾಟೀಲ್

ನನ್ನನ್ನು ಬೇಜವಾಬ್ದಾರಿ ಎಂದು ಹೇಳುವ ಹಕ್ಕು ನಿಮಗಿಲ್ಲ: ಸಚಿವ ಪಾಟೀಲ್
ಬೆಂಗಳೂರು , ಶನಿವಾರ, 28 ಮೇ 2016 (14:13 IST)
ಕೆಇಎ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ಬೇಜವಾಬ್ದಾರಿ ಎಂದು ಹೇಳುವ ಹಕ್ಕು ನಿಮಗಿಲ್ಲ ಎಂದು ವೈಧ್ಯಕೀಯ ಶಿಕ್ಷಣ ಸಚಿವ ಡಾ.ಶರಣು ಪ್ರಕಾಶ್ ಪಾಟೀಲ್ ಮಾಧ್ಯಮ ಮಿತ್ರರ ಮೇಲೆ ಗರಂ ಆದರು.
 
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈಧ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಎಸ್‌.ಪಿ.ಕುಲಕರ್ಣಿ ಅವರ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ಸರಕಾರದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಕೆಇಎ ಇಲಾಖೆಯಲ್ಲಿ ಮಾಜಿ ಆಡಳಿತಾಧಿಕಾರಿಯಿಂದ ನಡೆದ ಭ್ರಷ್ಟಾಚಾರದ ಕುರಿತು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್, ನಾನು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದೇನೆ ಎಂದು ಹೇಳುವ ಹಕ್ಕು ನಿಮಗಿಲ್ಲ ಎಂದು ಪತ್ರಕರ್ತರ ಮೇಲೆ ಗರಂ ಆದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್?