Publish Date: Mon, 17 Sep 2018 (19:26 IST)
Updated Date: Mon, 17 Sep 2018 (19:28 IST)
ರಾಜ್ಯದ ರೈತನ ಬದುಕು ಹಸನಾಗಿಸಲು ಕೃಷಿ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಮತ್ತು ಗ್ರಾಮೀಣ ಭಾಗದ ಯುವಸಮೂಹದ ಸಮಸ್ಯೆಗಳನ್ನು ಆಲಿಸಲು ಶೀಘ್ರದಲ್ಲಿಯೇ ರಾಜ್ಯದ ಪ್ರತಿ ಹೋಬಳಿಯಲ್ಲಿ ಜನಸ್ಪಂದನಾ ಸಭೆ ನಡೆಸಲಾಗುವುದೆಂದು ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ.
ಕಲಬುರಗಿ ನಗರದ ಹಳೆ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಡೆಸುವ ಈ ಸಭೆಗೆ ರೈತ ಮುಖಂಡರನ್ನು ಆಹ್ವಾನಿಸಿ ರೈತ ಸಮುದಾಯ ಆರ್ಥಿಕವಾಗಿ ಪ್ರಗತಿ ಸಾಧಿಸಲು ಅವರಿಂದಲೂ ಸಹ ಸಲಹೆ ಪಡೆಯಲಾಗುವುದು.
ವಿಶೇಷವಾಗಿ ಗ್ರಾಮೀಣ ಭಾಗದ ಯುವ ಸಮುದಾಯದ ಸಮಸ್ಯೆಗಳನ್ನು ಈ ಸಂದರ್ಭದಲ್ಲಿ ಆಲಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.