ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಲಕ್ಷ್ಮಿ ಹೆಬ್ಬಾಳಕರ ತಮ್ಮ ಗೃಹಕಚೇರಿಯಲ್ಲಿ ಮಂಗಳವಾರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯ ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ಚುನಾವಣಾಧಿಕಾರಿಗಳು ಅರ್ಧಕ್ಕೆ ಮೊಟಕುಗೊಳಿಸಿದರು. ಈ ಸಂಬಂಧ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
ಲಕ್ಷ್ಮೀ ಅವರು ಗೃಹಕಚೇರಿಯಲ್ಲಿ 500ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರನ್ನು ನೋಡಿ ಅಪರಿಚಿತರೊಬ್ಬರು ಚುನಾವಣಾಧಿಕಾರಿಗೆ ಮಾಹಿತಿಯನ್ನು ನೀಡಿದ್ದರು.
ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿದರು. ಹಲವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮಿ ಅವರಿಂದಲೂ ವಿವರ ಪಡೆದರು.