Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಭೆ

ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಭೆ
bangalore , ಮಂಗಳವಾರ, 4 ಏಪ್ರಿಲ್ 2023 (19:30 IST)
ಬೆಂಗಳೂರು ನಗರ ಜಿಲ್ಲಾ ಚುಣಾವಣಾಧಿಕಾರಿ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ. 75ಕ್ಕೆ ಏರಿಸುವ ಗುರಿಯನ್ನು ಹೊಂದಿದ್ದು, ಅದಕ್ಕೆ ತಾವೆಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.
 
ಬೊಮ್ಮನಹಳ್ಳಿ ವಲಯದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ(RWAs) ಪದಾಧಿಕಾರಿಗಳೊಂದಿಗೆ ಬನ್ನೇರುಘಟ್ಟ ಮುಖ್ಯ ರಸ್ತೆಯ ಕ್ರೈಸ್ಟ್ ವಿದ್ಯಾಲಯದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾನ ಮಾಡುವ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಸಂಬಂಧ ಎಲ್ಲರೂ ಮತದಾನದ ಪ್ರಾಮುಖ್ಯತೆಯನ್ನು ಅರಿತು ತಪ್ಪದೆ ಮತ ಚಲಾಯಿಸಬೇಕೆಂದು ತಿಳಿಸಿದರು.
 
ನಗರದಲ್ಲಿ 95,13,830 ಲಕ್ಷ ಮತದಾರರಿದ್ದಾರೆ. ಆದರೆ ಮತದಾನ ಮಾಡುವ ಪ್ರಮಾಣ ಮಾತ್ರ ಕಡಿಮೆಯಿದೆ. ಅದನ್ನು ನಾವೆಲ್ಲರೂ ಸೇರಿ ಬದಲಾಯಿಸಬೇಕಿದೆ. ಮತಗಟ್ಟೆಗಳ ಬಳಿಯಿರುವ ಸೌಲಭ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಜೊತೆಗೆ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರು ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿರುವ ಬಗ್ಗೆಯೂ ಜನರಲ್ಲಿ ತಿಳುವಳಿಕೆ ನೀಡಬೇಕು ಎಂದು ಹೇಳಿದರು.
 
 ನಗರ ವ್ಯಾಪ್ತಿಯಲ್ಲಿ ಬರುವ ಹೊಸ ಮತದಾರರು, ತಿದ್ದುಪಡಿ, ಸ್ಥಳ ಬದಾವಣೆ ಸೇರಿದಂತೆ ಇನ್ನಿತರೆ ಹೊಸ ಮತದಾನ ಗುರುತಿನ ಚೀಟಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆಯಾ 28 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬAಧಿಸಿದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಇನ್ನಿತರೆ ಚುನಾವಣಾ ದೂರುಗಳನ್ನು ಸ್ವೀಕರಿಸಲು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬ್‌ ಮಾದರಿಯಲ್ಲಿ ಕರ್ನಾಟಕದ ಟೋಲ್‌ ರದ್ದುಪಡಿಸಲು ಎಎಪಿ ಆಗ್ರಹ