Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ವಿಧಾನಸಭೆ ಚುನಾವಣೆಯಷ್ಟೇ ಹೈಪ್ ಕ್ರಿಯೇಟ್ ಮಾಡಿದ್ದ 20 ಜಿಲ್ಲೆಗಳ 25 ಸ್ಥಾನಗಳ ವಿಧಾನಪರಿಷತ್ ಚುನಾವಣೆ ಮುಕ್ತಾಯವಾಗಿದೆ.
ಮತಪೆಟ್ಟಿಗೆಯಲ್ಲಿ 90 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಈಗ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದ್ದು, ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ಸುಗಮ ಚುನಾವಣೆಗಾಗಿ 20 ಜಿಲ್ಲೆಗಳಲ್ಲಿ 6,073 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಸಣ್ಣ ಪುಟ್ಟ ಘಟನೆ ಹೊರತುಪಡಿಸಿದರೆ ಉಳಿದಂತೆ ಶಾಂತಿಯುತ ಮತದಾನ ನಡಿಯಿತು.
ಹಾವೇರಿಯ ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಲ್ಲಿ ಯಡಿಯೂರಪ್ಪ, ಬಾದಾಮಿಯಲ್ಲಿ ಸಿದ್ದರಾಮಯ್ಯ, ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಇತರೆ ನಾಯಕರು ಅವರವರ ಕ್ಷೇತ್ರಗಳಲ್ಲಿ ಮತದಾನ ಮಾಡಿದರು