ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದಿಂದ ಮನನೊಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷರ ಸ್ಥಾನಕ್ಕೆ ಮಂಜುಳಾ ಉಮೇಶ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಮಂಜುಳಾ ಉಮೇಶ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರವಾನಿಸಿದ್ದು, ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಪಕ್ಷಕ್ಕೆ ಮುಜುಗರ ತಂದಿದೆ. ಇದರಿಂದ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕಾರ್ಯಕ್ರಮಕ್ಕಾಗಿ ಬೆಳಗಾವಿಗೆ ತೆರಳಿದ್ದು, ಅವರು ಹಿಂದಿರುಗಿದ ಬಳಿಕ ಖದ್ದಾಗಿ ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡುತ್ತೇನೆ ಎಂದು ಮಂಜುಳಾ ಉಮೇಶ್ ತಿಳಿಸಿದ್ದಾರೆ.
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ