ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಕಾಂಗ್ರೆಸ್ ಮಾತ್ರ ಮಾತ್ರ ನಾಚಿಕೆ ಪಡುವಂತದ್ದಲ್ಲ. ಇಡೀ ರಾಜ್ಯವೇ ನಾಚಿಕೆ ಪಡುವಂತದ್ದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವೈ.ಮೇಟಿಯನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕಬೇಕು. ಇಂದಿನ ರಾಜಕಾರಣ ಅನೈತಿಕತೆ, ಅರಾಜಕತೆಯಿಂದ ಕೂಡಿದೆ. ಒಳ್ಳೆಯ ಹಾಗೂ ಪ್ರಾಮಾಣಿಕ ರಾಜಕಾರಣಿಗಳನ್ನು ಹುಡುಕುವುದೇ ಕಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಒಂದು ಕೋಮಿನ ಜನರನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ. ಗಂಗಾವತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ನಮ್ಮ ಸಂಘಟನೆಗಳು ಭಾಗಿಯಾಗಿಲ್ಲ. ಕಾಂಗ್ರೆಸ್ ಪಕ್ಷದ ಕುಮ್ಮಕ್ಕಿನಿಂದ ಹಿಂದೂಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ