Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಬೆಂಗಳೂರಿನಲ್ಲಿ ಓಡಾಡುತ್ತಿರುವ ಮೆಟ್ರೋ ರೈಲು ಇನ್ನು ಮೈಸೂರಿನಲ್ಲೂ ಸಂಚಾರ ಆರಂಭಿಸಲಿದೆ. ಈ ಬಗ್ಗೆ ಪ್ರಧಾನಿ ಮೋದಿಯೇ ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಸಾರಿಗೆ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಮೈಸೂರಿಗೆ ಮೆಟ್ರೋ ರೈಲು ವಿಸ್ತರಿಸಲು ಮತ್ತು 1200 ಎಲೆಕ್ಟ್ರಿಕಲ್ ಬಸ್ ಖರೀದಿಗೆ ಕೇಂದ್ರದಿಂದ 500 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗುತ್ತಿದೆ. ಅದೇ ರೀತಿ ಮೈಸೂರಿನಲ್ಲೂ ಮೆಟ್ರೋ ರೈಲು ವಿಸ್ತರಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.