ಕಲಬುರಗಿ : ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬಗ್ಗೆ ನ.20ರ ನಂತರ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾಲಿನ ದರ 3 ರೂಪಾಯಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನ.20 ರ ನಂತರ ಹಾಲು ಒಕ್ಕೂಟದ ಮಹಾಮಂಡಳ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುತ್ತದೆ.
ಜನರಿಗೆ ಭಾರ ಆಗದಂತೆ, ರೈತರಿಗೆ ಅನುಕೂಲವಾಗುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ನಂದಿನಿ ಹಾಲು ಮತ್ತು ಮೊಸರಿನ ದರ 3 ರೂ. ಏರಿಕೆ ಮಾಡಲು ಕೆಎಂಎಫ್ ಮುಂದಾಗಿತ್ತು.
ಸದ್ಯ ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್ ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಪ್ರತಿ ಲೀಟರ್ಗೆ 5 ರೂ. ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲ್ಯಾನ್ ಮಾಡಲಾಗಿದೆ.