ಸಂವಿಧಾನ ಬದಲಾವಣೆಗಾಗಿ ನಾವು ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇಂದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ್ದಾರೆ.
ಸಂಸತ್ತಿನಲ್ಲಿ ನಡೆದ ಕಲಾಪದಲ್ಲಿ ಅನಂತ್ ಕುಮಾರ್ ಹೆಗಡೆ, ನಾನು ಆ ರೀತಿ ಹೇಳಿಯೇ ಇಲ್ಲ. ಒಂದು ವೇಳೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಚಿವ ಹೆಗಡೆ ಹೇಳಿಕೆ ಕುರಿತಂತೆ ನಿನ್ನೆ ಸಂಸತ್ತಿನ ಕಲಾಪದಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿದ್ದವು ಇಂದು ಕೂಡಾ ಸಂಸತ್ತಿನ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.
ಪ್ರತಿಭಟನೆ ತೀವ್ರವಾಗಿ ದೇಶಾದ್ಯಂತ ಹರಡುವ ಆತಂಕದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಕೂಡಲೇ ಕ್ಷಮೆಯಾಚಿಸುವಂತೆ ಸಚಿವ ಹೆಗಡೆಯವರಿಗೆ ಸಲಹೆ ನೀಡಿತು ಎನ್ನಲಾಗಿದೆ. ಹೈಕಮಾಂಡ್ ಆದೇಶದ ಮೇರೆಗೆ ಸಟಿವ ಹೆಗಡೆ ಇಂದು ಕ್ಷಮೆಯಾಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.