Publish Date: Mon, 13 Jul 2020 (09:39 IST)
Updated Date: Mon, 13 Jul 2020 (09:41 IST)
ಬೆಂಗಳೂರು : ಕೊರೊನಾ ಎಫೆಕ್ಟ್ ಈಗ ರಾಜಕೀಯ ನಾಯಕರಿಗೂ ತಗುಲಿದ್ದು, ಈಗಾಗಲೇ ಕೆಲವು ನಾಯಕರು ಕ್ವಾರಂಟೈನ್ ಆಗಿದ್ದಾರೆ. ಅದೇರೀತಿ ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
ಸಚಿವ ಬಿ.ಸಿ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಹಾಗೂ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ ಎಂಬುದಾಗಿ ಸ್ವತಃ ಸಚಿವ ಬಿ.ಸಿ.ಪಾಟೀಲ್ ಅವರೇ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿದ್ದ ನಾನು ಮತ್ತು ನನ್ನ ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.