Publish Date: Sun, 05 Nov 2017 (11:27 IST)
Updated Date: Sun, 05 Nov 2017 (11:29 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ 7ನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ.
ನಾಳೆ ಮಧ್ಯಾಹ್ನ ವಿಚಾರಣೆಗಾಗಿ ಕುಟುಂಬ ಸಮೇತ ಆದಾಯ ತೆರಿಗೆ ಇಲಾಖೆ ಕಚೇರಿಗೆ ಹಾಜರಾಗುವಂತೆ ಐಟಿ ಅದಿಕಾರಿಗಳು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ 7ನೇ ಬಾರಿಗೆ ನೋಟಿಸ್ ಜಾರಿಗೊಳಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ಐಟಿ ನೋಟಿಸ್ ಪಾಲಿಸುವುದು ನನ್ನ ಕರ್ತವ್ಯವಾಗಿದೆ. ನಾಳೆ ಐಟಿ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
Rajesh patil
Publish Date: Sun, 05 Nov 2017 (11:27 IST)
Updated Date: Sun, 05 Nov 2017 (11:29 IST)