ಅವಧಿಗೂ ಮುನ್ನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲು ಅದು ಕುಂಬಾರ ಮಾಡಿದ ಮಡಿಕೆನಾ ಎಂದು ಸಚಿವ ಡಿ.ಕೆ.ಶಿವಕುಮಾರ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಕುಟುಂಬದಿಂದ ಬಂದವರು. ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ಐಟಿ ದಾಳಿ ಹಾಗೂ ರಾಜಕೀಯ ಬೆಳವಣಿಗೆ ಕುರಿತು ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಾಗರಾಜ್ ಅವರಿಗೆ ಸೂಚಿಸಿದ್ದೇನೆ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಕಾನೂನು ಪ್ರಕಾರ ಮುಂದುವರೆಯುತ್ತೇನೆ. ಒಪ್ಪಂದದಂತೆ ಎಂ.ಪಿ.ರವೀಂದ್ರ ಅವರು ಕೆಎಂಎಫ್ ನೂತನ ಅಧ್ಯಕ್ಷರಾಗುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ಆರೇಳು ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ